ಜಾಮೀನು ಸಿಕ್ಕಿದ ಖುಷಿ – ಮಾಡಾಳ್‌ ಮೆರವಣಿಗೆ – ವಕೀಲರ ಖಂಡನೆ

ಬೆಂಗಳೂರು: ಲಂಚ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 6 ದಿನಗಳ ಬಳಿಕ ದಾವಣಗೆರೆ ಜಿಲ್ಲೆಯ ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ದಾರೆ. ಇನ್ನು ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯವು ಶಾಸಕರಿಗೆ ಸೂಚನೆ ನೀಡಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್‌, ಲೋಕಾಯುಕ್ತ ದಾಳಿ ಸಂಧರ್ಭದಲ್ಲಿ ದೊರೆತ ಹಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆಗಳಿವೆ. ಅದನ್ನು ಅಧಿಕಾರಿಗಳಿಗೆ ಕೊಟ್ಟು ನನ್ನ ಹಣ ವಾಪಾಸ್‌ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ತುರ್ತು ಸಭೆ ನಡೆಸಿದ ಬೆಂಗಳೂರು ವಕೀಲರ ಸಂಘ, ವಿರೂಪಾಕ್ಷಾಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ತೀವ್ರ ಕಳವಳ ವ್ಯಕ್ತ ಪಡಿಸಿದೆ. ನ್ಯಾಯಾಲಯವು ಎಲ್ಲರಿಗೂ ಸಮಾನವಾಗಿರಬೇಕು, ಉಳ್ಳವರ ಪ್ರಕರಣಗಳನ್ನು ತೀರ್ಮಾನಿಸುವಂತೆಯೇ ಬಡ ಬೋರೆ ಗೌಡನ ಅರ್ಜಿಯನ್ನು ಪುರಸ್ಕರಿಸುವಂತಾಗಬೇಕು ಎಂದು ಸಂಘ ಕೋರಿದೆ. ಒಟ್ಟಿನಲ್ಲಿ ಈ ವಿಚಾರಣೆ ಪ್ರಕ್ರಿಯೆಯನ್ನು ಖಂಡಿಸಿರುವ ಸಂಘ ಸುಪ್ರಿಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದೆ. 

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here