










ವರದಿ ಪ್ರಕಾರ ಸ್ವತಃ ಅರ್ಚನಾ ಗೌತಮ್ ಫೇಸ್ಬುಕ್ ಲೈವ್ನಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಮೀರತ್ ಪೊಲೀಸರು ಸಂದೀಪ್ ಸಿಂಗ್ ವಿರುದ್ಧ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 504, 506 ಮತ್ತು ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಫೆಬ್ರವರಿ26ರಂದು ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ತಮ್ಮ ಮಗಳು ಛತ್ತೀಸ್ಗಢದ ರಾಯ್ಪುರಕ್ಕೆ ಹೋಗಿದ್ದಳು ಈ ವೇಳೆ ಅರ್ಚನಾ ಗೌತಮ್ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿಸುವಂತೆ ಪಿಎ ಸಂದೀಪ್ ಸಿಂಗ್ ಅವರನ್ನು ಕೇಳಿದ್ದರು. ಇದಕ್ಕೆ ನಿರಾಕರಿಸಿದ ಆತ ಅರ್ಚನಾ ಜತೆ ಅಸಭ್ಯವಾಗಿ ಅವಾಚ್ಯ ಶಬ್ಧಗಳನ್ನು ಬಳಸಿ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಅರ್ಚನಾ ಗೌತಮ್ ತಂದೆ ಆರೋಪಿಸಿದ್ದಾರೆ.











