ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ 2022 ನೇ ಸಾಲಿನ ಹೋಟೆಲ್ ಮ್ಯಾನೇಜ್ಮೆಂಟ್ ಪರೀಕ್ಷೆಯಲ್ಲಿ ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಮೊದಲ 3 ರ್ಯಾಂಕ್ ಪಡೆದಿದ್ದಾರೆ.
ಬಿ.ಎಸ್ಸಿ ಫುಡ್ ಟೆಕ್ನಾಲಜಿ ವಿಭಾಗದಲ್ಲಿ ಮಂಗಳೂರಿನ ಸಫೀನಾ ಮೊದಲ ರ್ಯಾಂಕ್ ಪಡೆದಿದ್ದು, ಕೊಡಗಿನ ಮೇಘನಾ ಜಿ.ಪಿ 2 ನೇ ರ್ಯಾಂಕ್ ಪಡೆದಿದ್ದಾರೆ. ಕಾಸರಗೋಡಿನ ಭಾವನಾ ಕೆ 3ನೇ ರ್ಯಾಂಕ್ ಪಡೆದುಕೊಳ್ಳುವ ಮೂಲಕ ಸಾಧನೆ ಮೆರೆದಿದ್ದಾರೆ.