ವೇಶ್ಯಾವಾಟಿಕೆ ದಂಧೆ- ವಿಟ್ಲದ ಮಹಿಳೆ ಬಂಧನ

ಉಳ್ಳಾಲ: ಉಳ್ಳಾಲ ಪಂಡಿತ್ ಹೌಸ್ ಸಮೀಪದ ವಿಜೇತ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ.7 ರ ರಾತ್ರಿ ದಾಳಿ ನಡೆಸಿ ಓರ್ವ ಮಹಿಳೆಯನ್ನು ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.

ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಉಪ‌ನಿರೀಕ್ಷಕರಾದ ಮಂಜುಳಾ.ಎಲ್, ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here