ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಮಾರ್ಚ್ 12 ರಂದು ರಾಜ್ಯಕ್ಕೆ ಮತ್ತೆ ಭೇಟಿ ನೀಡಲಿದ್ದು ಸುಮಾರು 16,000 ಕೋಟಿ ರೂಪಾಯಿ ಕಾಮಗಾರಿಗೆ ಚಾಲನೆ, ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಮಂಡ್ಯದ ನಿಡಘಟ್ಟದ ವರೆಗೆ ಪೂರ್ಣಗೊಂಡಿರುವ ಬೆಂಗಳೂರು – ಮೈಸೂರು ದಶಪಥ ಎಕ್ಸ್ಪ್ರೆಸ್ ಹೈ ವೇ ಉದ್ಘಾಟಿಸಲಿರುವ ಪ್ರಧಾನಿ ಮದ್ದೂರಿನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಧಾರವಾಡಕ್ಕೆ ಆಗಮಿಸಲಿರುವ ಪ್ರಧಾನಿ ನೂತನ ಐ ಐ ಟಿ ಕೇಂದ್ರವನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. 2023 ರಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ನೀಡುತ್ತಿರುವ 6 ನೇ ಭೇಟಿ ಇದಾಗಿದೆ.