ಬೆಂಗಳೂರು: ಒಂದೆಡೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಒಕ್ಕಲಿಗರನ್ನು ಓಲೈಸುವ ಕೆಲಸ ಮಾಡುತ್ತಿರುವ ಸರಕಾರ ಇನ್ನೊಂದೆಡೆ ಕೊಲೆಯ ಕಳಂಕವನ್ನು ಮೆತ್ತಿ ಅದೇ ಒಕ್ಕಲಿಗ ಸಮುದಾಯಕ್ಕೆ ಐತಿಹಾಸಿಕವಾಗಿ ಶಾಶ್ವತ ಕಪ್ಪು ಚುಕ್ಕೆ ಮೆತ್ತಲು ಷಡ್ಯಂತ್ರ ರೂಪಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿಲ್ಲ ಉರಿ ಗೌಡ ಮತ್ತು ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿದ್ದಲ್ಲದೇ ಪ್ರಧಾನಿ ನರೇಂದ್ರ ಮೋದಿ ನಡೆಸಿದ ರೋಡ್‌ಶೋ ಸಂದರ್ಭದಲ್ಲಿ ಮಹಾದ್ವಾರಕ್ಕೆ ಇದೇ ಹೆಸರಿಟ್ಟಿದ್ದರ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಇದು ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ ಎಂದವರು ಹೇಳಿದ್ದಾರೆ.
Home ಪ್ರಚಲಿತ ಸುದ್ದಿ ಒಕ್ಕಲಿಗ ಸಮುದಾಯಕ್ಕೆ ಶಾಶ್ವತ ಕಪ್ಪುಚುಕ್ಕೆ ಮೆತ್ತಲು ಬಿಜೆಪಿ ಷಡ್ಯಂತ್ರ – ಹೆಚ್.ಡಿ ಕುಮಾರಸ್ವಾಮಿ