ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾವೂರು ಕುಂಜತ್ತಬೈಲ್ ನಿವಾಸಿ ಜಪಾನ್ ಮಂಗ ಯಾನೆ ರಾಜ ಯಾನೆ ರೋಹನ್ ರೆಡ್ಡಿ (36) ಎಂಬಾತನನ್ನು ನಗರ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಹಲ್ಲೆ, ಕೊಲೆ ಯತ್ನ, ಕೊಲೆ, ದರೋಡೆ ಪ್ರಕರಣ ದಾಖಲಾಗಿದ್ದು ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ 2017 ರಿಂದ ತಲೆಮಾರೆಸಿಕೊಂಡಿದ್ದ. ಈತ ಬೆಂಗಳೂರಿನ ಕೋರಮಂಗಲದ ಎಸ್ ಜಿ ಪಾಳ್ಯದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿ ಮಂಗಳೂರಿಗೆ ಕರೆತಂದು ಕದ್ರಿ ಪೋಲೀಸರ ವಶಕ್ಕೆ ನೀಡಿದ್ದಾರೆ.