ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್ ಸಿಂಗ್ ಪರಾರಿ

ಮಂಗಳೂರು: ಖಲಿಸ್ತಾನಿ ಪ್ರತ್ಯೇಕ ರಾಷ್ಟ್ರದ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಬೆನ್ನಟ್ಟಿ ಅಡ್ಡಗಟ್ಟಿದ್ದರೂ ಬೈಕ್‌ ನಲ್ಲಿ ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾಗಿದ್ದಾನೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ಹೇಳಿದ್ದಾರೆ. ಅಮೃತ್‌ಪಾಲ್‌ ಸಹಚರರು ಜಲಂಧರ್‌ನ ಶಾಹಕೋಟ್ ತಹಸಿಲ್‌ಗೆ ತೆರಳುತ್ತಿದ್ದಾಗ 7 ಜಿಲ್ಲೆಗಳ ಸಿಬ್ಬಂದಿಯನ್ನು ಒಳಗೊಂಡ ರಾಜ್ಯ ಪೊಲೀಸರ ವಿಶೇಷ ತಂಡವು ಅವರನ್ನು ಹಿಂಬಾಲಿಸಿದೆ. ಆದರೆ ಆತ ಬೈಕ್‌ನಲ್ಲಿ ವೇಗವಾಗಿ ಸಂಚರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಪೊಲೀಸರು ಅಮೃತ್‌ಪಾಲ್‌ ನ 78 ಮಂದಿ ಆಪ್ತರನ್ನು ಬಂಧಿಸಿದ್ದಾರೆ. ಇವರ ಬಂಧನದ  ಬೆನ್ನಲ್ಲೇ    ಅಮೃತ್‌ಪಾಲ್‌ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡುತ್ತಿರುವ ವೀಡಿಯೋಗಳು ಹರಿದಾಡ ತೊಡಗಿದ ಹಿನ್ನೆಲೆಯಲ್ಲಿ ಪಂಜಾಬ್‌ನ ಹಲವೆಡೆ ಇಂಟರ್‌ನೆಟ್‌ ಸೇವೆಗಳನ್ನು ಬಂದ್‌ ಮಾಡಲಾಗಿತ್ತು.  ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಪಡೆ ಕಟ್ಟಿಕೊಂಡು ತಿರುಗಾಡುತ್ತಿದ್ದ ಅಮೃತ್‌ಪಾಲ್‌ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇತ್ತೀಚೆಗೆ ಅಮೃತ್‌ಪಾಲ್ ಸಿಂಗ್ ನ ಕೆಲ ಸಹಚರನನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಆತನ ಶಸ್ತ್ರಧಾರಿ ಸಹಚರರು ಅಮೃತಸರದ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು. ಅಮೃತ್‌ಪಾಲ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.

LEAVE A REPLY

Please enter your comment!
Please enter your name here