ಮಂಗಳೂರು: ಎಳೆಯ ಪ್ರಾಯದ ಮಕ್ಕಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, 7ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಾನಸಿಕ ಖಿನ್ನತೆಗೊಳಗಾಗಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಮಾ.19 ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.