ಪೆಡಲ್ ಗೆ ಸಿಲುಕಿದ ಪಾದರಕ್ಷೆ – ತಪ್ಪಿದ ನಿಯಂತ್ರಣ- ಕಾರು ಪಲ್ಟಿ

ಮಂಗಳೂರು: ಕಾರನ್ನು ಹಿಂದಕ್ಕೆ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.

ಇಳಿಜಾರಿನಲ್ಲಿ ಕಾರನ್ನು ಹಿಂದಕ್ಕೆ ತೆಗೆಯುವ ಸಂದರ್ಭ ಚಾಲಕ ಧರಿಸಿದ್ದ ಪಾದರಕ್ಷೆ ಎಕ್ಸಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಪಲ್ಟಿಯಾಗಿ ನುಜ್ಜುಗುಜ್ಜಾಗಿದ್ದು, ಕಾರಿನ ಚಾಲಕ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಕಾರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here