ಮಂಗಳೂರು: ದೇಶದ ರಾಜಧಾನಿ ದೆಹಲಿಯ ಹಲವೆಡೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಗಳನ್ನು ಹಾಕಿರುವ ಬಗ್ಗೆ 100 ಕ್ಕೂ ಹೆಚ್ಚು ಎಫ್ ಐ ಆರ್ ದಾಖಲಿಸಲಾಗಿದ್ದು 6 ಮಂದಿಯನ್ನು ಬಂಧಿಸಲಾಗಿದೆ.
ದೆಹಲಿಯ ಹಲವೆಡೆ ” ಮೋದಿ ಹಠಾವೋ ದೇಶ್ ಬಚಾವೋ ” ಎಂಬ ಶೀರ್ಷಿಕೆಯ ಪೋಸ್ಟರ್ ಗಳನ್ನು ಅಂಟಿಸಲಾಗಿದ್ದು, ಪೋಸ್ಟರ್ ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ಅಥವಾ ಪ್ರಕಾಶಕರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದು ತನಿಖೆ ನಡೆಯುತ್ತಿದೆ.