ಮುಂದಿನ 2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದಿನ ಎರಡು ಮೂರು ದಿನಗಳ ಒಳಗಾಗಿ ಬಿಡುಗಡೆಯಾಗಲಿದೆ ಎಂದು ಕೆ ಪಿ ಸಿ ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
    ಯುಗಾದಿ ಹಬ್ಬದಂದು ಪಟ್ಟಿ ಬಿಡುಗಡೆ ಮಾಡುವುದಾಗಿ ಈ ಮೊದಲು ಹೇಳಲಾಗಿತ್ತು. ಎ ಐ ಸಿ ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಯುಗಾದಿ ಹಬ್ಬದ ನಿಮಿತ್ತ ಬೆಂಗಳೂರಿಗೆ ಬಂದಿರುವ ಹಿನ್ನಲೆಯಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

    LEAVE A REPLY

    Please enter your comment!
    Please enter your name here