ಮಂಗಳೂರು : ಗುಜರಾತ್ ನ ಸೂರತ್ ನ್ಯಾಯಾಲಯ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಆದೇಶದಲ್ಲಿ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಹುಲ್ ಗಾಂಧಿಗೆ 30ದಿನಗಳ ಜಾಮೀನು ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ರಾಹುಲ್ ಗಾಂಧಿ ವಿವಾಧಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ 2019ರಲ್ಲಿ ಬಿಜೆಪಿ ಶಾಸಕ ಮತ್ತು ಗುಜರಾತ್ ನ ಮಾಜಿ ಸಚಿವ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನನಷ್ಟೆ ಮೊಕದ್ದಮೆ ದಾಖಲಿಸಿದ್ದರು. ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಹೊಂದಿದ್ದಾರೆ ಎಂದು 2019ರಲ್ಲಿ ಕೋಲಾರದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡುವ ವೇಳೆ ರಾಹುಲ್ ಈ ಹೇಳಿಕೆ ನೀಡಿದ್ದರು.