ಇನ್ನು ತಪ್ಪಿಸಿ ಕೊಳ್ಳುವಂತಿಲ್ಲ- ಬದಲಾಗಲಿದೆ ಹೆದ್ದಾರಿ ಟೋಲ್‌ ಸಿಸ್ಟಮ್

ಮಂಗಳೂರು: ದೇಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ, ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನವನ್ನೊಳಗೊಂಡ ಜಿಪಿಎಸ್‌ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರ ದೂರಕ್ಕೆ ಶುಲ್ಕವನ್ನು ವಿಧಿಸುವ ಗುರಿಯನ್ನು ಹೊಂದಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯವು, ವಾಹನಗಳನ್ನು ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು, ವಾಹನಗಳ ನಂಬರ್ ಪ್ಲೇಟ್‌ಗಳನ್ನು ಸ್ವಯಂಚಾಲಿತವಾಗಿ  ಗುರುತಿಸುವ ಪ್ರಾಯೋಗಿಕ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here