ಮಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದರು.
ಕೆ.ಆರ್.ಪುರಂನಿಂದ ವೈಟ್‌ಫೀಲ್ಡ್‌ವರೆಗಿನ ನೂತನ ಮೆಟ್ರೋ ಮಾರ್ಗ 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, 13.71 ಕಿಲೋಮೀಟರ್ ನ ನೂತನ ಮಾರ್ಗ 12 ನಿಲ್ದಾಣಗಳನ್ನು ಹೊಂದಿದೆ. ಪ್ರಧಾನಿ ಮೋದಿ ಬೆಂಗಳೂರಿನಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ವಿಡಿಯೋಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ
https://twitter.com/i/broadcasts/1kvJpmkBkzgxE