ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ದೇಶದ ವಿವಿದೆಡೆ ಪ್ರತಿಭಟನೆ ನಡೆದಿದೆ. ಚಂಡೀಗಢ ಯುವ ಕಾಂಗ್ರೆಸ್ ಹೊಸದಿಲ್ಲಿ-ಚಂಡೀಗಢ ಶತಾಬ್ದಿ ರೈಲನ್ನು ಚಂಡೀಗಢ ರೈಲು ನಿಲ್ದಾಣದಲ್ಲಿ ತಡೆದು ಪ್ರತಿಭಟನೆ ನಡೆಸಿದೆ.
ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಾಯಿಗೆ ಬೀಗ ಹಾಕಿ ಕುಳಿತು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಮಹಾರಾಷ್ಟ್ರದ ಎಂವಿಎ ಶಾಸಕರು ಕಪ್ಪು ರಿಬ್ಬನ್ ಕಟ್ಟಿಕೊಂಡು ವಿಧಾನಸಭೆಯ ಹೊರಗೆ ಮೌನ ಪ್ರತಿಭಟನೆ ನಡೆಸಿದ್ದಾರೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಕೇಂದ್ರ ಕಚೇರಿಗೆ ಆಗಮಿಸಲಾರಂಭಿಸಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
#WATCH | Kerala: Congress holds protest in Wayanad over disqualification of Rahul Gandhi from Parliament.
Rahul Gandhi was a former MP from Wayanad. pic.twitter.com/rCHV592mEk
— ANI (@ANI) March 25, 2023