ಮಂಗಳೂರು: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ ವೇಳೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರ ಪುರುಷೋತ್ತಮ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ.26ರಂದು ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ ವೇಳೆ ಟೂಲ್ಸ್ ಬಾಕ್ಸ್ ಒಳಗಡೆ ಕೈ ಚೀಲದಲ್ಲಿ 500 ರೂಪಾಯಿ ಮುಖ ಬೆಲೆಯ 5 ಲಕ್ಷ ರೂ. ಪತ್ತೆಯಾಗಿದೆ.
ಕಾರಿನಲ್ಲಿದ್ದ ಚಾಲಕ ಅಹಮ್ಮದ್ ಕಬೀರ್ ಹಾಗೂ ಅಬ್ದುಲ್ ಖಾದರ್ ಎಂಬುವರನ್ನು ವಿಚಾರಿಸಿದಾಗ ಹಣದ ಬಗ್ಗೆ ದಾಖಲಾತಿ ಹಾಗೂ ತೃಪ್ತಿಕರವಾದ ಉತ್ತರ ನೀಡದ ಹಿನ್ನೆಲೆಯಲ್ಲಿ 5 ಲಕ್ಷ ಹಣ ಮತ್ತು ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಸಿದ್ದಾರೆ.