ಒಳ ಮೀಸಲಾತಿ ಕಡಿತ- ಬಂಜಾರ ಸಮುದಾಯದ ಪ್ರತಿಭಟನೆ

ಮಂಗಳೂರು:  ನ್ಯಾಯಮೂರ್ತಿ ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಬಂಜಾರ ಸಮಾಜದವರು ಮುತ್ತಿಗೆ ಹಾಕಲು ಯತ್ನಿಸಿ, ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆ ಸಂಬಂಧಿಸಿದಂತೆ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ ಎಂದು ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು.

ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪಟ್ಟಣದಲ್ಲಿ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದಾರೆ. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು‌. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಸದ್ಯ ಶಿಕಾರಿಪುರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

LEAVE A REPLY

Please enter your comment!
Please enter your name here