ದೈವ ನರ್ತನದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ದೈವ ನರ್ತಕ

ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೋತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕಾಂತು ಅಜಿಲ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕುಸಿದು ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮರಣ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here