ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರಿಬ್ಬರು ಫುಡ್ ಬ್ಲಾಗರ್ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿ ವಿಫಲರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳರು ಮೊಬೈಲ್ ಕದಿಯಲು ಯತ್ನಿಸಿದ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿವೆ.
ಘಟನೆಯ ಬಗ್ಗೆ ಕಂಟೆಂಟ್ ಕ್ರಿಯೇಟರ್ ರುಚಿಕಾ ಟ್ವಿಟರ್ ಖಾತೆಯಲ್ಲಿ ಈ ಕುರಿತಾದ ಅನುಭವ ಹಂಚಿಕೊಂಡಿದ್ದಾರೆ. ಮಾ.29ರಂದು ರೆಸ್ಟೋರೆಂಟ್‌ಗಾಗಿ ವಿಡಿಯೋ ಮಾಡುವಾಗ ಕಳ್ಳರು ಏಕಾಏಕಿ ಬಂದು ನನ್ನ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಮೊಬೈಲನ್ನು ಕೆಳಗೆ ಮಾಡಿದೆ, ವಿಡಿಯೋದಲ್ಲಿ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ ಎಂದಿರುವ ಅವರು ರೆಸ್ಟೋರೆಂಟ್ ಮುಖ್ಯ ದ್ವಾರದ ಮುಂಭಾಗದಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಜೊತೆಗೆ ವಿವರಣೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಬೆಂಗಳೂರಿನ ಸುರಕ್ಷತಾ ಕ್ರಮಗಳನ್ನು ಪ್ರಶ್ನಿಸಿ ಟ್ವಿಟರ್ ನಲ್ಲಿ ಕಮೆಂಟ್ ಮಾಡಲಾಗುತ್ತಿದೆ. ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸರು ಭರವಸೆ ನೀಡಿದ್ದಾರೆ.
A follower ruchika writes:
As we are content creators and we were regular shooting content for the restaurant when these two boys approached and tried to snatch my phone from my hand , luckily I pulled my phone down at that point , preventing him from snatching it.@BlrCityPolice pic.twitter.com/RALPqQlTVT— Bangalore 360 (@bangalore360_) March 27, 2023