ವಿಧಾನಸಭಾ ಚುನಾವಣೆ -ಕಾಂಗ್ರೆಸ್‌ ಗೆಲ್ಲುವ ಕುದುರೆ ಎಂದ ಎಬಿಪಿ- ಸಿ ವೋಟರ್‌ ಸಮೀಕ್ಷೆ

ಮಂಗಳೂರು: ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೆ ಎಬಿಪಿ- ಸಿ ವೋಟರ್‌ ಸಂಸ್ಥೆ ನಡೆಸಿದ ಸಮೀಕ್ಷೆ ಹೊರ ಬಿದ್ದಿದ್ದು ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದೆ. ಕಾಂಗ್ರೆಸ್‌ ಪಕ್ಷವು ಈ ಬಾರಿ 115ರಿಂದ 127 ಸ್ಥಾನ ಪಡೆಯಲಿದೆ ಎಂದು ಹೇಳಿರುವ ಸಮೀಕ್ಷೆ ಬಿಜೆಪಿ 68 ರಿಂದ 80 ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ಉಳಿದಂತೆ ಜೆಡಿಎಸ್‌ 23 ರಿಂದ 35 ಸ್ಥಾನ ಹಾಗೂ ಇತರೆ 2 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಅಧಿಕಾರದ ಗದ್ದುಗೆ ಏರಲು ಬಿಜೆಪಿ, ಕಾಂಗ್ರೆಸ್‌, ಜೆಡಿಸ್‌ ಪಕ್ಷಗಳು ರಣತಂತ್ರಗಳನ್ನು ರೂಪಿಸುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದು ಅಧಿಕಾರಕ್ಕೇರಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ. ಇಬ್ಬರ ನಡುವಿನ ನ್ಯಾಯದ ಲಾಭ ಪಡೆಯಲು ಜೆಡಿಎಸ್‌ ಪ್ರಯತ್ನಿಸುತ್ತಿದೆ. 

LEAVE A REPLY

Please enter your comment!
Please enter your name here