ಮಂಗಳೂರು: ಬಲಪಂಥೀಯ ಉಗ್ರಗಾಮಿಗಳ ಹಿಟ್ ಲಿಸ್ಟ್ ನಲ್ಲಿರುವ ಪ್ರೊ. ನರೇಂದ್ರ ನಾಯಕ್ ಅವರಿಗೆ ನೀಡಲಾಗಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ರದ್ದುಗೊಳಿಸಿದೆ.
ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲು ಮಾಡುವಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ. ನರೇಂದ್ರ ನಾಯಕ್ ಅವರಿಗೆ ನೀಡಲಾಗಿದ್ದ ಅಂಗರಕ್ಷಕ ಭದ್ರತೆಯನ್ನು ರದ್ದುಗೊಳಿಸಿರುವುದನ್ನು ಡಿವೈಎಫ್ಐ ಖಂಡಿಸಿದೆ. ಅವರ ಜೀವಕ್ಕೆ ತೊಂದರೆಯಾಗುವಂತಹ ಅನಾಹುತಗಳಿಗೆ ಪೊಲೀಸ್ ಇಲಾಖೆ ಮತ್ತು ಸರಕಾರ ನೇರಹೊಣೆ ಎಂದು ಹೇಳಿದೆ. ಈ ಹಿಂದಿನಂತೆ ಯಾವುದೇ ಷರತ್ತುಗಳಿಲ್ಲದೆ ಅವರಿಗೆ ಅಂಗರಕ್ಷಕ ಭದ್ರತೆಯನ್ನು ಮುಂದುವರಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.