ಮೋದಿ ಪದವಿ ವಿವಾದ-ಗು.ಹೈ ಕೋರ್ಟ್‌ ತೀರ್ಪು-ಕೇಜ್ರಿಗೆ 25 ಸಾವಿರ ದಂಡ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈ ಕೋರ್ಟ್ ಮಾ.31 ರಂದು ತೀರ್ಪು ನೀಡಿದೆ. ಈ ಕುರಿತು ಮಾಹಿತಿ ಹಕ್ಕು ಆಧಾರದಲ್ಲಿ ಅರ್ಜಿ ಸಲ್ಲಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ.


ಪ್ರಧಾನಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಗುಜರಾತ್ ವಿಶ್ವ ವಿದ್ಯಾಲಯ ಮತ್ತು ದೆಹಲಿ ವಿಶ್ವ ವಿದ್ಯಾಲಯದ ಪಿಐಓ ಗಳಿಗೆ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರವನ್ನು ನೀಡುವಂತೆ ಮುಖ್ಯ ಮಾಹಿತಿ ಆಯೋಗದ ಆದೇಶವನ್ನು ನ್ಯಾಯಮೂರ್ತಿ ಬಿರೆನ್ ವೈಷ್ಣವ್ ಅವರ ಏಕಸದಸ್ಯ ನ್ಯಾಯಪೀಠ ತಳ್ಳಿಹಾಕಿದೆ.

LEAVE A REPLY

Please enter your comment!
Please enter your name here