ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ನಿರ್ದೇಶನದ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 60 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಗೆ ಮಾ 31 ರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಶೀಟರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅವರ ಮನೆಯನ್ನು ಶೋಧಿಸಲಾಗಿದೆ. ಅವರ ಚಲನವಲನಗಳ ಮೇಲೆ ನಿಗಾ ವಹಿಸಿದ್ದು ಮಾಹಿತಿ ಕಲೆ ಹಾಕಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.