ಮಂಗಳೂರು :ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9 ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭಾರಿ ಪ್ರಧಾನಿ ಬಂಡೀಪುರ ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ದೇಶದಲ್ಲಿ ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ಮೂರು ದಿನಗಳ ಮೆಗಾ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರಕಾರ ಕೈಗೊಂಡ ಕಾರ್ಯಕ್ರಮಗಳ ವರದಿ ಹಾಗೂ ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಏಪ್ರಿಲ್ 4 ರಿಂದ 9 ರ ವರೆಗೆ ಬಂಡೀಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಅತಿಥಿ ಗೃಹ, ಕಾಟೇಜ್ ಬುಕಿಂಗ್, ಸಫಾರಿ ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.