`ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ಆಲಿಯಾ, ರಶ್ಮಿಕಾ

ಮಂಗಳೂರು: ನೀತಾ ಮುಖೇಶ್ ಅಂಬಾನಿ ಕಾರ್ಯಕ್ರಮದಲ್ಲಿ ಆಲಿಯಾ ಭಟ್ ಜತೆ ರಶ್ಮಿಕಾ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. 

ನೀತಾ ಮುಖೇಶ್ ಅಂಬಾನಿ ಈವೆಂಟ್‌ನಲ್ಲಿ ಹಿಂದಿ ಚಿತ್ರರಂಗದ ಅನೇಕ ದಿಗ್ಗಜರು ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಪಡ್ಡೆಹುಡುಗರ ಕ್ರಶ್ ಕ್ವೀನ್ ರಶ್ಮಿಕಾ, ಸ್ಟಾರ್ ನಟಿ ಆಲಿಯಾ ಭಟ್ ಜೊತೆ ಸೇರಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಆಲಿಯಾ- ರಶ್ಮಿಕಾ ಇಬ್ಬರೂ ಆಸ್ಕರ್ ಪ್ರಶಸ್ತಿ ವಿಜೇತ ಆರ್‌ ಆರ್‌ ಆರ್ ಸಿನಿಮಾದ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ್ದು, ಎಲ್ಲರ ಗಮನ ಸೆಳೆದಿದೆ. ಮಾತ್ರವಲ್ಲ ಇದರ ವಿಡಿಯೋ ಸಖತ್ತಾಗಿ ವೈರಲ್ ಆಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here