ಒಳ ಮೀಸಲಾತಿ ವಿರೋಧಿಸಿ ಬಂಜಾರ ಸ್ವಾಮೀಜಿ ಆತ್ಮಹತ್ಯೆ ಯತ್ನ

ಮಂಗಳೂರು: ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಸಿಎಂ ಕ್ಷೇತ್ರದಲ್ಲಿ ನಡೆದಿದೆ.

ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ನಡೆಯನ್ನು ಖಂಡಿಸಿ ಹಾವೇರಿ ತಹಶಿಲ್ದಾರ್ ಕಚೇರಿ ಬಳಿ ಬಂಜಾರ ಸಮುದಾಯದ ಸ್ವಾಮೀಜಿ ಗುಂಡೂರು ಗ್ರಾಮದ ತಿಪ್ಪೇಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಅವರನ್ನು ರಕ್ಷಿಸಿದ್ದಾರೆ. ಅಸ್ವಸ್ಥರಾಗಿದ್ದ ಸ್ವಾಮೀಜಿಯನ್ನು ಶಿಗ್ಗಾಂವ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here