ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಮುಂದುವರಿದಿದ್ದು ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.
ಏ.8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ವರಿಷ್ಠರು ಅಂತಿಮಗೊಳಿಸಲಿದ್ದು, ಏಪ್ರಿಲ್ 8 ರಂದು ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ