ಅಶ್ಲೀಲ ಫೋಟೊ ವೈರಲ್‌ – ಸೈಬರ್‌ ಕ್ರೈಮ್‌ ಠಾಣೆಗೆ ಮಠಂದೂರು ದೂರು

ಮಂಗಳೂರು: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಮೂಲದ ಮಹಿಳೆಯೊಂದಿಗಿರುವ ಫೊಟೊಗಳು  ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಸಂಬಂಧ ಮಹಿಳೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈಗ ಶಾಸಕ ಸಂಜೀವ ಮಠಂದೂರು ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್‌ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಚುನಾವಣೆಗೆ ಟಿಕೆಟ್‌ ಘೋಷಣೆಗೆ ಪಕ್ಷ ಸಿದ್ದತೆ ನಡೆಸುತ್ತಿರುವ ವೇಳೆ ನನ್ನ ಮಾನಹಾನಿ ಮಾಡುವ ದುರುದ್ದೇಶದಿಂದ ಎಡಿಟ್‌ ಮಾಡಿದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here