ಎ.10 ಮತ್ತು13- 2 ಕಂತಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ?

ಮಂಗಳೂರು: ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಎ.10 ಹಾಗೂ 13ಕ್ಕೆ 2 ಕಂತಿನಲ್ಲಿ ಪ್ರಕಟಗೊಳ್ಳಲಿದೆ ಎನ್ನಲಾಗಿದೆ.  ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಳೆದ ಬುಧವಾರಕ್ಕೆ ಪೂರ್ಣಗೊಂಡಿದೆ. ಹಾಲಿ ಶಾಸಕರು ಸೇರಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳನ್ನು ಹೊಂದಿರುವ ಸಂಭಾವ್ಯಯರ ಪಟ್ಟಿಯೊಂದಿಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬುಧವಾರ‌ ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಎ.7 ಶುಕ್ರವಾರ ಬಿಜೆಪಿ ಹಿರಿಯ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು ಅವರೊಂದಿಗೆ ಕೆಲವು ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯ ಬಿ ಎಸ್ ಯಡಿಯೂರಪ್ಪ ಕೂಡ ತೆರಳಲಿದ್ದು ಏ.8ರಿಂದ 10ರವರೆಗೆ ದೆಹಲಿಯಲ್ಲಿ ವಾಸ್ತವ್ಯ  ಹೂಡಲಿದ್ದಾರೆ. ಸಿಎಂ ಬೊಮ್ಮಾಯಿ ಅವರ ಪರಿಸ್ಕೃತ ಪ್ರವಾಸ ಪಟ್ಟಿ ಸಿದ್ಧವಾಗಿದ್ದು,ಅವರೂ ಶುಕ್ರವಾರ   ದೆಹಲಿಗೆ ತರಲಿದ್ದಾರೆ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಕೆಲವೊಂದು ಬದಲಾವಣೆಯೊಂದಿಗೆ ಪಟ್ಟಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ. 

LEAVE A REPLY

Please enter your comment!
Please enter your name here