ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡಿರುವ ಘಟನೆ ಹುಣಸೂರು ತಾಲೂಕು ತೊಂಡಾಳು ಗ್ರಾಮದಲ್ಲಿ ನಡೆದಿದೆ.
ಮರ್ಮಾಂಗ ಕೊಯ್ದುಕೊಂಡಿರುವ ವ್ಯಕ್ತಿಯನ್ನು ರಾಜಶೆಟ್ಟಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಕಂಠಪೂರ್ತಿ ಕುಡಿದಿದ್ದ ರಾಜ ಶೆಟ್ಟಿ ತನ್ನ ಮರ್ಮಾಂಗವನ್ನು ತಾನೇ ಕೊಯ್ದುಕೊಂಡಿದ್ದಾನೆ. ಈತನ ಕೂಗಾಟ ಕೇಳಿದ ಗ್ರಾಮಸ್ಥರು ಹುಣಸೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.