ಮಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ವಧು ವೇದಿಕೆಯ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾಳೆ. ಗುಂಡು ಹಾರಿಸಿದ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪರಿಣಾಮ ವಧು ನಾಪತ್ತೆಯಾಗಿದ್ದಾಳೆ ಎಂದು ವರದಿಯಾಗಿದೆ. ಇದೆಲ್ಲವೂ ನಡೆದಿದ್ದು ಕಳೆದ ಶುಕ್ರವಾರ ರಾತ್ರಿ ಜಂಕ್ಷನ್ ಪ್ರದೇಶದ ಸೇಲಂಪುರ ಗ್ರಾಮದ ಅತಿಥಿ ಗ್ರಹದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ. ವೇದಿಕೆಯಲ್ಲಿ ವಧು ಮತ್ತು ವರ ಕೂತಿರುವ ವೇಳೆ ಬಂದ ವ್ಯಕ್ತಿಯೊಬ್ಬ ಲೋಡ್ ಮಾಡಿದ ರಿವಾಲ್ವರನ್ನು ವಧುವಿನ ಕೈಗೆ ನೀಡಿದ್ದಾನೆ. ವಧು ನಾಲ್ಕು ಸುತ್ತು ಗುಂಡು ಹಾರಿಸಿದ್ದಾಳೆ. ಮದುವೆಗೆ ಬಂದವರು ಇದನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ವಿಡಿಯೋ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು ಶೀಘ್ರದಲ್ಲಿ ವಧುವಿನ ಕುಟುಂಬದ ಸದಸ್ಯರ ವಿಚಾರಣೆ ನಡೆಸಲಾಗುವುದು ಮತ್ತು ಬಂದೂಕು ನೀಡಿದ ವ್ಯಕ್ತಿಯನ್ನು ಗುರುತಿಸುವ ಪ್ರಯತ್ನ ಮಾಡುವುದಾಗಿ ಹತ್ರಾಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
In UP's Hathras, a groom sat with "kato toh khoon nhi" face next to the bride. pic.twitter.com/i7iNqiMIP4
— Piyush Rai (@Benarasiyaa) April 9, 2023