ಮಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಹೇಳಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆ ಬಂದ ಕೂಡಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಬಾಂದ್ರಾ ಮನೆಯ ಹೊರಗೆ ಈಗಾಗಲೇ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಕಳುಹಿಸಿದ್ದ ಆರೋಪಿಯನ್ನು ಮುಂಬೈ ಪೊಲೀಸರೊಂದಿಗೆ ರಾಜಸ್ಥಾನ ಪೊಲೀಸರು ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದರು.