







ಮಂಗಳೂರು: ಮೂಡಬಿದ್ರಿ ಶಾಸಕ ಉಮಾನಾಥ್ ಕೋಟ್ಯಾನ್ ತನ್ನ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ 40ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕಾರಕ ಫೋಟೋ ವಿಡಿಯೋ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸದಂತೆ ಬೆಂಗಳೂರು ಜೆಎಂಎಫ್‌ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಶಾಸಕರ ಈ ನಡೆ ಸಂಶಯ ಮತ್ತು ಚರ್ಚೆಗೆ ಕಾರಣವಾಗಿದೆ.














