ಡೈರಿಯ ಬಾಯ್ಲರ್ ಸ್ಫೋಟ-18,000 ಹಸುಗಳ ಸಾವು

ಟೆಕ್ಸಾಸ್‌: ಸೌತ್‌ಫೋರ್ಕ್ ಡೇರಿ ಫಾರ್ಮ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡು 18,000 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಘಟನೆ ಅಮೆರಿಕದ ಪಶ್ಚಿಮ ಟೆಕ್ಸಾಸ್ ನಲ್ಲಿ ನಡೆದಿದೆ.

ಡೈರಿಯ ಬಾಯ್ಲರ್ ಸ್ಫೋಟಗೊಂಡು ಇಡೀ ಫಾರ್ಮ್ ಹೊತ್ತಿ ಉರಿದಿದ್ದು, ಫಾರ್ಮ್ ನಲ್ಲಿದ್ದ 18 ಸಾವಿರ ಹಸುಗಳು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಡೈರಿ ಮಾಲೀಕರು ಘಟನೆಯ ಬಗ್ಗೆ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಅಗ್ನಿಶಾಮಕ ದಳದವರು ಉರಿಯುತ್ತಿರುವ ಕಟ್ಟಡದೊಳಗೆ ಸಿಲುಕಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಪೂರ್ಣಗೊಳಿಸಿದ್ದಾರೆ. ಮೃತಪಟ್ಟ ಒಂದು ಹಸುವಿನ ಬೆಲೆ 1.63 ಲಕ್ಷ ರೂ. ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here