3 ಡ್ರಗ್‌ ಪೆಡ್ಲರ್ಸ್‌ ಅಂದರ್

ಮಂಗಳೂರು: ನಗರದಲ್ಲಿ ಕಾಲೇಜು ಮತ್ತು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ  ಬಂಧಿಸಿದ್ದಾರೆ.

ವೆಲೆನ್ಸಿಯಾ, ಗೋರಿಗುಡ್ಡೆಯ  ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತರು. ಆರೋಪಿಗಳ ಬಳಿಯಿದ್ದ 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾವನ್ನು ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here