ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಕರ್ನಾಟಕ ಬ್ಯಾಂಕ್ ನಿವೃತ್ತ ಸಿಇಒ ಎಂ ಎಸ್ ಮಹಾಬಲೇಶ್ವರಗೆ ಡಾಕ್ಟರೇಟ್ ಆಫ್ ಲೆಟರ್ಸ್ ಪದವಿ ನೀಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಐತಾಳ್ ಹೇಳಿದ್ದಾರೆ.
ಏಪ್ರಿಲ್ 20ರಂದು ಬೆಳಿಗ್ಗೆ 9:30ಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಘಟಿಕೋತ್ಸವ ನಡೆಯಲಿದೆ. 794 ಪದವಿ ವಿದ್ಯಾರ್ಥಿಗಳು 256 ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿ ಒಟ್ಟು ಸಾವಿರದ ಐನೂರು ವಿದ್ಯಾರ್ಥಿಗಳಿಗೆ ಅಂದು ಪದವಿ ಪ್ರಧಾನ ಮಾಡಲಾಗುವುದು.