



ಮಂಗಳೂರು : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯಿದ್ದೀನ್ ಬಾವ ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.







ಮಾಧ್ಯಮದೊಂದಿಗೆ ಮಾತನಾಡಿದವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವುದಾಗಿಯೂ ಮಂಗಳೂರು ನಗರ ಉತ್ತರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದಾರೆ.














