ಮಂಗಳೂರು : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ ರಮಾನಾಥ ರೈ ಗುರುವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಇಂದು ಬೆಳಿಗ್ಗೆ ಬಂಟ್ವಾಳ ವೆಂಕಟರಮಣ ದೇವಸ್ಥಾನ, ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಮತ್ತು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಿ ಸಿ ರೋಡು ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಸೇರಿದಂತೆ ಹಲವಾರು ನಾಯಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ