ರಂಗಾಯಣ ನಿರ್ದೇಶಕ ಅಡ್ಡ0ಡ ಕಾರ್ಯಪ್ಪ ರಾಜೀನಾಮೆ 

ಮಂಗಳೂರು( ಮೈಸೂರು): ವಿವಾದಗಳಿಂದಾಗಿ ಸದಾ ಸುದ್ದಿಯಲ್ಲಿದ್ದ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜೀನಾಮೆ ಪತ್ರ ಬರೆದಿರುವವರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸಿ ನೈತಿಕ ಜವಾಬ್ದಾರಿಯಿಂದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಅವಧಿಯಲ್ಲಿ ಸಹಕರಿಸಿದ ರಂಗಾಯಣದ ಎಲ್ಲಾ ಸಿಬ್ಬಂದಿ ಕಲಾವಿದರು ಅಧಿಕಾರಿ ವರ್ಗ ಈ ಪ್ರೇಕ್ಷಕರು ಮಾಧ್ಯಮದ ಸ್ನೇಹಿತರು ಕಷ್ಟಕಾಲದಲ್ಲಿ ಕೈಜೋಡಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here