ಮಂಗಳೂರು(ಬೆಂಗಳೂರು): ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪಕ್ಷ ಪುಡಿದೆದ್ದು ನಿಲ್ಲಬೇಕಿದೆ. ಅದಕ್ಕಾಗಿ ಅಗತ್ಯ ಕಾಯಕಲ್ಪ ಮಾಡಲಾಗುವುದು. ರಾಜ್ಯದಲ್ಲಿ ಬೇಗನೆ ರಾಷ್ಟ್ರೀಯ ಪ್ರಮುಖರ ಸಭೆ ನಡೆಯಲಿದ್ದು, ಅಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನಿರ್ಧಾರವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಮಾದ್ಯಮದೊಂದಿಗೆ ಮಾತನಾಡಿ ತಿಳಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.
ಬಿಜೆಪಿ ಸೋಲು ಬೇಸರ ತರಿಸಿದೆ, ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮ ವಹಿಸುವುದಾಗಿ ಅವರು ಹೇಳಿದ್ದಾರೆ.