ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ನಿಧನ

ಮಂಗಳೂರು : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥರು ಆಗಿರುವ ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಸಂಜೆ ವೇಳೆಗೆ ಮನೆಗೆ ಹಿಂದಿರುಗಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here