ಮಂಗಳೂರು(ಮುಂಬೈ): ಎನ್ಕೌಂಟರ್ ಸ್ಪೆಶಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ಕಾರ್ಕಳ ಎಣ್ಣೆಹೊಳೆ ಮೂಲದವರಾದ ದಯಾನಾಯಕ್ ಮುಂಬೈ ಪೊಲೀಸ್ ಅಪರಾಧ ವಿಭಾಗದ 9ನೇ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್ ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಹಿಸಲಾಗಿತ್ತು.