ಮಂಗಳೂರು: ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.
ಸ್ಪೀಕರ್ ಸ್ಥಾನಕ್ಕೆ ಡಿ.ಬಿ.ಜಯಚಂದ್ರ, ಆರ್.ವಿ.ದೇಶ್ ಪಾಂಡೆ, ಹೆಚ್.ಕೆ.ಪಾಟೀಲ್ ಹೆಸರು ಕೇಳಿ ಬರುತ್ತಿದ್ದಾದರೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜತೆಗಿನ ಮಾತುಕತೆ ಬಳಿಕ ಯು.ಟಿ.ಖಾದರ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ಸೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಎರಡು ವರ್ಷಗಳ ಬಳಿಕ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ.