ಮಂಗಳೂರು (ದೆಹಲಿ): ನೂತನ ಸಂಸತ್ ಭವನದ ಉದ್ಘಾಟನೆಯ ಆಮಂತ್ರಣವನ್ನು 19 ವಿರೋಧ ಪಕ್ಷಗಳು ಬಹಿಷ್ಕರಿಸಿ ಜಂಟಿ ಹೇಳಿಕೆ ನೀಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಸತ್ ಭವನ ಉದ್ಘಾಟನೆ ಮಾಡಲಿದ್ದಾರೆ ಎಂಬ ವಿಚಾರವನ್ನು ವಿರೋಧ ಪಕ್ಷಗಳು ಸರ್ವಾನುಮತದಿಂದ ಆಕ್ಷೇಪಿಸಿದ್ದು, ಈ ಗೌರವ ಪ್ರಧಾನಿ ಬದಲಿಗೆ ಭಾರತದ ರಾಷ್ಟ್ರಪತಿಗೆ ಸೇರಿದೆ ಎಂದು ಹೇಳಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗೊತ್ತಿ ಹೊಸ ಸಂಸತ್ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ಪ್ರಧಾನಿ ಅವರ ನಿರ್ಧಾರ ಅವಮಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿದೆ.