ನಾಳೆ ರಾಜ್ಯ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರ – ರಣದೀಪ್ ಸಿಂಗ್ ಸುರ್ಜೆವಾಲ

ಮಂಗಳೂರು( ಬೆಂಗಳೂರು): ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ.

ಪಕ್ಷದ ನಾಯಕರ ಜೊತೆ ಸಿದ್ದರಾಮಯ್ಯ ಅವರು ಹಲವು ಹೆಸರುಗಳನ್ನು ಸೂಚಿಸಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳ ಪರಮಾಧಿಕಾರ, ಅವರ ವಿವೇಚನೆಗೆ ಬಿಟ್ಟದ್ದು, ಎಂದು ಹೇಳಿದ ಸುರ್ಜೆವಾಲ ನಾಳೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಚರ್ಚೆ ಮುಕ್ತಾಯಗೊಂಡಿದ್ದು ಖಾತೆಗಳ ಹಂಚಿಕೆ ಬಗ್ಗೆ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here