ಮಂಗಳೂರು: ಸರಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡುತ್ತೇನೆ. ದೇಶದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇನೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಸಂಸದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ದರಾಮಯ್ಯ ಮೇಲಿನ ಲೋಕಾಯುಕ್ತ ಕೇಸನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ. ಈ ಬಗ್ಗೆ ದುಃಖ ಇದೆ ಎಂದು ಅವರು ಹೇಳಿದ್ದಾರೆ.