ತುಟ್ಟಿ ಭತ್ಯೆ 35 % ಕ್ಕೆ ಹೆಚ್ಚಿಸಿ ಸರ್ಕಾರದ ಆದೇಶ-ಸರ್ಕಾರಿ ನೌಕರರಿಗೆ ಬಂಪರ್

ರಾಜ್ಯದಲ್ಲಿ ಅಧಿಕಾರಕ್ಕೆ ಏರಿರುವ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಸಿಹಿ ಸುದ್ದಿ ಸರ್ಕಾರಿ ನೌಕರರಿಗೆ ನೀಡಿದ್ದು, ತುಟ್ಟಿಭತ್ಯೆಯನ್ನು 35 % ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.

2018 ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಸಂಬಳವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯ ದರಗಳನ್ನು ಈಗ ಇರುವ ಮೂಲ ವೇತನದ ಶೇ.31 ರಿಂದ 4 % ಏರಿಕೆ ಮಾಡಲಾಗಿದೆ. ಅದನ್ನು ಶೇ.35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಿದೆ. 1 ನೇ ಜನವರಿ 2023ಕ್ಕೆ ಅನ್ವಯವಾಗುವಂತೆ ಇದು ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.

ಈ ಸೌಲಭ್ಯವು ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಸಹ ಅನ್ವಯ ಆಗಲಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನೀವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಕೂಡ ಇದು ಅನ್ವಯ.

LEAVE A REPLY

Please enter your comment!
Please enter your name here