



ಮಂಗಳೂರು: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ.







ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತ ನೋವುಂಟು ಮಾಡಿದೆ, ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ರೈಲು ದುರಂತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂಪಾಯಿ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ, ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ 50,000 ಪರಿಹಾರ ಧನ ನೀಡಲಾಗುವುದು ಎಂದು ರೈಲ್ವೆ ಸಚಿವರು ಘೋಷಿಸಿದ್ದಾರೆ.














