ಕುಸ್ತಿಪಟುಗಳ ಪ್ರತಿಭಟನೆಗೆ ವಿದೇಶಿ ನೆರವು – ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಮಂಗಳೂರು: ದೇಶದ ರಾಜಧಾನಿ ಹೊಸದಿಲ್ಲಿಯಲ್ಲಿ ಕುಸ್ತಿಪಟುಗಳು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ವಿರುದ್ಧ ತಿಂಗಳುಗಳಿಂದ ನಡೆಸುತ್ತಿರುವ ಪ್ರತಿಭಟನೆ ಕಾವು ಪಡೆಯುತ್ತಿರುವಂತೆ, ಈ ಪ್ರತಿಭಟನೆಗೆ ಭಾರತವನ್ನು ಅಸ್ಥಿರಗೊಳಿಸಲು ಬಯಸುತ್ತಿರುವ ವಿದೇಶಿ ಶಕ್ತಿಗಳು ಆರ್ಥಿಕ ನೆರವು ನೀಡುತ್ತಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ, ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಪ್ರತಿಭಟನೆಗೆ ದೇಶದ ಪ್ರಜಾಪ್ರಭುತ್ವವನ್ನು ಅಲ್ಲೋಲ ಕಲ್ಲೋಲಗೊಳಿಸುವ ಸಲುವಾಗಿ ವಿದೇಶಿ ವ್ಯಕ್ತಿಗಳಿಂದ ಫಂಡಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶಿ ವ್ಯಕ್ತಿಯ ಪ್ರತಿನಿಧಿ ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

LEAVE A REPLY

Please enter your comment!
Please enter your name here